ಕರ್ನಾಟಕ

karnataka

ETV Bharat / state

ಆಸ್ತಿಗಾಗಿ ಅನ್ಯ ಕೋಮಿನ ಎರಡು ಕುಟುಂಬಗಳ ನಡುವೆ ಮಾರಾಮಾರಿ: ನಾಲ್ವರು ಆಸ್ಪತ್ರೆಗೆ ದಾಖಲು - ಆಸ್ತಿಗಾಗಿ ಎರಡು ಕುಟುಂಬಗಳ ಮಾರಾಮಾರಿ

ಸುರಪುರದಲ್ಲಿ ಆಸ್ತಿ ವಿಚಾರವಾಗಿ ಅನ್ಯ ಕೋಮಿನ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ನಾಲ್ಕಕ್ಕೂ ಅಧಿಕ ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Bustle between two families for property
ಆಸ್ತಿಗಾಗಿ ಎರಡು ಕುಟುಂಬಗಳ ನಡುವೆ ಗಲಾಟೆ

By

Published : Jun 28, 2020, 8:20 PM IST

ಸುರಪುರ(ಯಾದಗಿರಿ):ಆಸ್ತಿ ವಿಚಾರವಾಗಿ ಗಲಾಟೆ ನಡೆದು, ನಾಲ್ಕೈದು ಜನರಿಗೆ ಗಂಭೀರ ಗಾಯವಾಗಿಗೊಂಡಿರುವ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆದಿದೆ.

ಆಸ್ತಿ ವಿಚಾರವಾಗಿ ಅನ್ಯ ಕೋಮಿನ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ನಾಲ್ಕಕ್ಕೂ ಅಧಿಕ ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ಕುಟುಂಬಗಳ ನಡುವೆ ಅನೇಕ ವರ್ಷಗಳಿಂದ ಆಸ್ತಿ ವಿಚಾರವಾಗಿ ವಿವಾದವಿದ್ದು, ಇಂದು ಅದು ಉಲ್ಬಣಗೊಂಡು ಗಲಾಟೆಗೆ ಕಾರಣವಾಗಿದೆ.

ಆಸ್ತಿಗಾಗಿ ಎರಡು ಕುಟುಂಬಗಳ ನಡುವೆ ಗಲಾಟೆ

ಮಧ್ಯಾಹ್ನದ ವೇಳೆಗೆ ಗಲಾಟೆ ನಡೆದಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ನಾಲ್ಕು ಜನರಿಗೆ ಗಾಯಗಳಾಗಿ ಕೈ ಕಾಲುಗಳಿಗೆ ತೀವ್ರವಾಗಿ ಪೆಟ್ಟಾಗಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details