ಯಾದಗಿರಿ:ಬೈಕ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಜಿಲ್ಲೆಯ ಹುಣಸಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೈಕ್ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವು... ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ - BYKE CAR ACCIDENT
ಯಾದಗಿರಿಯಲ್ಲಿ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಚಾಲಕ ಪರಾರಿ
ಸಾಬಣ್ಣ ಜಾಲಿಬೆಂಚಿ (30), ಹಣಮಂತ ಹಳ್ಳಿ(41) ಅಪಘಾತದಲ್ಲಿ ಮೃತಪಟ್ಟವರು. ಇವರು ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಕಾಮನಟಗಿಯಿಂದ ಹುಣಸಗಿಗೆ ತೆರಳುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರ್ ಸಮೇತ ಚಾಲಕ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.