ಕರ್ನಾಟಕ

karnataka

ETV Bharat / state

ಗ್ರಾಮ ವಾಸ್ತವ್ಯಕ್ಕೆ ಸಿಎಂ ರೆಡಿ... ಕೆಎಸ್ಆರ್​ಟಿಸಿ ಬಸ್ ಏರಿದ ಕರುನಾಡ ದೊರೆ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

By

Published : Jun 21, 2019, 11:59 AM IST

Updated : Jun 21, 2019, 12:50 PM IST

ಯಾದಗಿರಿ :ಕೆಎಸ್ಆರ್ ಟಿ‌ಸಿ ಬಸ್ಸ್ ನಲ್ಲಿ ಯಾದಗಿರಿಯಿಂದ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಕಿ ಗ್ರಾಮಕ್ಕೆ, ಬಸ್ಸ್ ಮೂಲಕ ಪ್ರಯಾಣ ಬೆಳೆಸುತ್ತಿರುವ ಸಿ ಎಂ ಕುಮಾರಸ್ವಾಮಿಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ಸಾಥ್ ನೀಡಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಸಿ ಎಂ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಮಾರಂಭದ ಬೃಹತ್ ವೇದಿಕೆ ನಿರ್ಮಿಸಲಾಗಿದೆ.

ಗ್ರಾಮ ವಾಸ್ತವ್ಯಕ್ಕೆ ಸಿಎಂ ರೆಡಿ

ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಇಂದು ಬೆಳಗ್ಗೆಯಿಂದಲೇ ಸಾರ್ವಜನಿಕರು ಬರುತ್ತಿದ್ದು, ಇದಕ್ಕಾಗಿ ಜಿಲ್ಲಾಡಳಿತ ಪ್ರತ್ಯೇಕ ಕೌಂಟರ್ ಗಳನ್ನು ತೆರೆದಿದ್ದು, ಅರ್ಜಿ ಸಲ್ಲಿಸಿದವರಿಗೆ ಟೋಕನ್ ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮವೂ ಜರುಗಲಿದೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮುಖ್ಯಮಂತ್ರಿಗಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಚಂಡ್ರಕಿ ಗ್ರಾಮ ತಳಿರು, ತೋರಣಗಳಿಂದ ಸಿಂಗಾರಗೊಂಡಿದ್ದು, ಜನಪದ ಕಲಾ ತಂಡಗಳು ರಾಜ್ಯದ ಮುಖ್ಯಮಂತ್ರಿಯನ್ನು ಬರಮಾಡಿಕೊಳ್ಳಲು ಅಣಿಯಾಗಿವೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಈ ಭಾಗದ ಜನತೆ ಮುಖ್ಯಮಂತ್ರಿಗಳ ಈ ಐತಿಹಾಸಿಕ ಕಾರ್ಯಕ್ರಮವನ್ನು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

Last Updated : Jun 21, 2019, 12:50 PM IST

ABOUT THE AUTHOR

...view details