ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ ಕಾರು ಅಪಘಾತ... ಒಂದೇ ಗ್ರಾಮದ ನಾಲ್ವರ ದುರ್ಮರಣ..! - Latest Accident In Yadgir

ಯಾದಗಿರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರ್ ಒಂದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

car-accident-in-yadgir-dot-four-dead
ಕಾರು ಅಪಘಾತ ಒಂದೇ ಗ್ರಾಮದ ನಾಲ್ವರ ಸಾವು..!

By

Published : Feb 21, 2020, 6:50 AM IST

ಯಾದಗಿರಿ: ವೇಗವಾಗಿ ಚಲಿಸುತ್ತಿದ್ದ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್​ನಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪೂರ ತಾಲೂಕಿನ ಗುಂಡಾಪುರ ಕ್ರಾಸ್ ಬಳಿ ನಡೆದಿದೆ.

ಕಾರು ಅಪಘಾತ ಒಂದೇ ಗ್ರಾಮದ ನಾಲ್ವರ ಸಾವು..!

ಶರಣಬಸವ ಅಂಗಡಿ (24), ಶರಣು ಕೂಡ್ಲಿಗಿ (24), ವಿಶ್ವನಾಥ ಘಂಟಿ (23) ಹಾಗೂ ತಿರುಪತಿ (28) ಎಂಬುವವರು ದುರ್ಘಟನೆಯಲ್ಲಿ ಮೃತಪಟ್ಟವರು. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ನಗನೂರ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

ಅಪಘಾತದಿಂದ ನಜ್ಜುಗುಜ್ಜಾದ ಕಾರು

ಶಹಾಪೂರ ನಗರಕ್ಕೆ ಕೆಲಸದ ನಿಮಿತ್ತ ಆಗಮಿಸಿ ವಾಪಸ್ ಊರಿಗೆ ತೆರಳುವ ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಗೋಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details