ಯಾದಗಿರಿ:ಕೇಂದ್ರ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯಿಂದ ಜನಾಶೀರ್ವಾದ ಯಾತ್ರೆ ಯಾದಗಿರಿಗೆ ತೆರಳಿತ್ತು. ಈ ವೇಳೆ, ಯಾದಗಿರಿ ತಾಲೂಕಿನ ಯರಗೋಳ್ ಬಳಿ ಮೂರು ನಾಡ ಬಂದೂಕುಗಳಿಂದ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಕೋರಿದರು.