ಯಾದಗಿರಿ:ರಥೋತ್ಸವದ ವೇಳೆರಥದ ಗೋಪುರ ಮುರಿದು ಬಿದ್ದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ನಡೆದಿದೆ.
ಕೊರೊನಾ ನಿಷೇಧದ ಮಧ್ಯೆಯೂ ಬಳಿಚಕ್ರ ಗ್ರಾಮದಲ್ಲಿ ಆತ್ಮಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಕ್ತರು ರಭಸವಾಗಿ ರಥ ಎಳೆಯುವಾಗ ರಥದ ಮೇಲ್ಭಾಗ ಮುರಿದು ಬಿದ್ದು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.