ಕರ್ನಾಟಕ

karnataka

By

Published : May 11, 2020, 12:56 PM IST

ETV Bharat / state

ಚಿಂತನಹಳ್ಳಿ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ; ಓರ್ವ ವ್ಯಕ್ತಿ ಸಾವು

ಶನಿವಾರ ಬೆಳಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದ ಶರಣಪ್ಪ ಚಿಕಿತ್ಸೆಗೆಂದು ಭಾನುವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಸಾವನ್ನಪ್ಪಿದ್ದಾನೆ.

ಚಿಂತನಹಳ್ಳಿ
ಸಾವು

ಗುರುಮಠಕಲ್ :ತಾಲೂಕಿನ ಚಿಂತನಹಳ್ಳಿಯಲ್ಲಿ ಕಲುಷಿತ ‌ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದಾನೆ.

ವಾಂತಿ ಭೇದಿಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಿಂತನಹಳ್ಳಿ ಗ್ರಾಮದ ನಿವಾಸಿ ಶರಣಪ್ಪ ಮದ್ದೂರ್ (72) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಚಿಂತನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 30ಕ್ಕೂ ಹೆಚ್ಚು ಜನ‌ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದ ಶರಣಪ್ಪ ಚಿಕಿತ್ಸೆಗೆಂದು ಭಾನುವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಸಾವನ್ನಪ್ಪಿದ್ದಾನೆ. ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details