ಯಾದಗಿರಿ: ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿ ಪ್ರವಾಹದಿಂದ ತತ್ತರಿಸಿ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರಿಗಾಗಿ ಜಿಲ್ಲಾಡಳಿತ ಚಿತ್ರ ಮನರಂಜನಾ ಕಾರ್ಯಕ್ರಮ ಏರ್ಪಡಿಸಿದೆ.
ಪರಿಹಾರ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ಸಿನಿಮಾ ಮನರಂಜನೆ - ವಡಿಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮ
ಯಾದಗಿರಿ ಜಿಲ್ಲಾಡಳಿತದ ವತಿಯಿಂದ ಸಂತ್ರಸ್ತ ಕೇಂದ್ರದಲ್ಲಿರುವ ಸಂತ್ರಸ್ತರಿಗಾಗಿ ಚಿತ್ರ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲಾಡಳಿತದ ವತಿಯಿಂದ ಪ್ರವಾಹ ಸಂತ್ರಸ್ತರ ಅನೂಕೂಲಕ್ಕಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿತ್ತು. ವಡಿಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಸಂತ್ರಸ್ತರ ಮನಸ್ಸಿನ ಉಲ್ಲಾಸಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಚಿತ್ರ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಕಾರ್ಮಿಕ ಅಧಿಕಾರಿ ರಘುವೀರ ಸಿಂಗ್ ಠಾಕೂರ ನೇತೃತ್ವದಲ್ಲಿ ಚಿತ್ರ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಡೆಬೆಂಬಳಿ ಪರಿಹಾರ ಕೆಂದ್ರದಲ್ಲಿ ಸಂತ್ರಸ್ತರಿಗಾಗಿ ಎಲ್ಲಾ ರೀತಿಯ ಸೌಕಾರ್ಯಗಳನ್ನು ನೀಡಲಾಗಿದ್ದು, ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ.