ಕರ್ನಾಟಕ

karnataka

ETV Bharat / state

ಲಾಕ್​ಡೌನ್​ ನಡುವೆಯೂ ಬಟ್ಟೆ ವ್ಯಾಪಾರ: ವ್ಯಾಪಾರಿ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ - ಯಾದಗಿರಿಯಲ್ಲಿ ಲಾಕ್​ಡೌನ್​ ನಡುವೆಯೇ ಬಟ್ಟೆ ವ್ಯಾಪಾರ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ರಾಜಸ್ಥಾನ ಮೂಲದ ಬಟ್ಟೆ ವ್ಯಾಪರಿಯೊಬ್ಬ ಬಟ್ಟೆ ಅಂಗಡಿ ತೆರೆದು ವ್ಯಾಪರ ಮಾಡುತ್ತಿದ್ದ. ಈ ಬಗ್ಗೆ ಪ್ರಶ್ನಿಸಿದ್ದ ಕೆಂಭಾವಿ ಪುರಸಭೆ ಅಧಿಕಾರಿಗಳು ಮತ್ತು ಬಟ್ಟೆ ವ್ಯಾಪರಸ್ಥರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.

argument between businessmen and officer
ಬಟ್ಟೆ ವ್ಯಾಪರಿ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ..

By

Published : Apr 28, 2020, 5:36 PM IST

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಲಾಕ್​ಡೌನ್ ಉಲ್ಲಂಘಿಸಿ ಬಟ್ಟೆ ಅಂಗಡಿ ತೆರೆದು ವ್ಯಾಪರ ಮಾಡುತ್ತಿದ್ದ ವ್ಯಾಪಾರಿ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಬಟ್ಟೆ ವ್ಯಾಪಾರಿ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ
ರಾಜಸ್ಥಾನ ಮೂಲದ ಬಟ್ಟೆ ವ್ಯಾಪರಿಯೊಬ್ಬ ಲಾಕ್​ಡೌನ್​ ನಡುವೆಯೂ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಇದನ್ನ ಪ್ರಶ್ನಿಸಿದ ಕೆಂಭಾವಿ ಪುರಸಭೆ ಅಧಿಕಾರಿಗಳು ಮತ್ತು ಬಟ್ಟೆ ವ್ಯಾಪಾರಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಧಿಕಾರಿಗಳು ಸ್ಥಳಕ್ಕೆ ಹೋಗಿ ಅರ್ಧ ಗಂಟೆ ಕಾಲ ವ್ಯಾಪಾರಿ ಹೊರ ಬಾರದೆ ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಇಳಿದಿದ್ದ ಎನ್ನಲಾಗಿದೆ.

ಇನ್ನು ಅಧಿಕಾರಿಗಳ ಮಾತಿಗೆ ಸ್ಪಂದಿಸದ ವ್ಯಾಪಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ABOUT THE AUTHOR

...view details