ಯಾದಗಿರಿ :ತುಮಕೂರಿನಲ್ಲಿ ಖಾಸಗಿ ಬಸ್ ಅಪಘಾತದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಷ್ಟೇ ಯಾದಗಿರಿ ಆಗಮಿಸಿರುವೆ. ಅಪಘಾತದ ಕುರಿತಂತೆ ಎಲ್ಲಾ ವಿವರವನ್ನು ತಕ್ಷಣ ಪಡೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಅಪಘಾತಕ್ಕೆ ಕಾರಣವೇನು ಎಂಬುದನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ತುಮಕೂರಿನ ಖಾಸಗಿ ಬಸ್ ಅಪಘಾತದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿರುವುದು.. ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದ ಕುರಿತು ಮಾತನಾಡಿದ ಅವರು, ನಿನ್ನೆಯಷ್ಟೇ ಈ ಕುರಿತು ಗುಜರಾತ್ನಲ್ಲಿ ಚರ್ಚೆಯಾಗಿದೆ. ಈ ಕುರಿತು ನಮ್ಮ ಸಚಿವರು ಚರ್ಚೆ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯವರು ವಿವರ ಪಡೆದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಮಕ್ಕಳ ಶಿಕ್ಷಣ ನೈತಿಕತೆ ಕೊಡಬೇಕೆಂದು ನಿಟ್ಟಿನಲ್ಲಿ ಭಗವದ್ಗೀತೆ ಅಳವಡಿಕೆ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:ಪಾವಗಡದ ಬಳಿ ಖಾಸಗಿ ಬಸ್ ಪಲ್ಟಿ: 5 ಮಂದಿ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ