ಕರ್ನಾಟಕ

karnataka

ETV Bharat / state

ಯಾದಗಿರಿ: ಮೆಡಿಕಲ್ ಕಾಲೇಜು ಕಾಮಗಾರಿಗೆ ಮುಖ್ಯಮಂತ್ರಿ ಬಿಎಸ್​ವೈ ಭೂಮಿ ಪೂಜೆ - ಮೆಡಿಕಲ್ ಕಾಲೇಜಿಗೆ ಶಂಕುಸ್ಥಾಪನೆ

ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಯಾದಗಿರಿಯ ಮೆಡಿಕಲ್ ಕಾಲೇಜು ಸೇರಿದಂತೆ 532.91 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಬಿಎಸ್​​ವೈ ಭೂಮಿ ಪೂಜೆ ನೆರವೇರಿಸಿದರು.

cm did bhoomipooja
ಮುಖ್ಯಮಂತ್ರಿ ಬಿಎಸ್​ವೈ ಭೂಮಿ ಪೂಜೆ

By

Published : Jan 6, 2021, 8:46 PM IST

ಯಾದಗಿರಿ: ಯಾದಗಿರಿ ಜನರ ಬಹುದಿನದ ಕನಸಿನ ಕೂಸಾಗಿದ್ದ ಮೆಡಿಕಲ್ ಕಾಲೇಜು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.

ಮೆಡಿಕಲ್ ಕಾಲೇಜು ಕಾಮಗಾರಿಗೆ ಮುಖ್ಯಮಂತ್ರಿ ಬಿಎಸ್​ವೈ ಭೂಮಿ ಪೂಜೆ

ನಗರದ ಹೊರ ಭಾಗದಲ್ಲಿರುವ ಮುದ್ನಾಳ ಗ್ರಾಮದ ಬಳಿಯ ನೂತನ ಜಿಲ್ಲಾಸ್ಪತ್ರೆಯನ್ನು ಸಿಎಂ ಲೋಕಾರ್ಪಣೆಗೊಳಿಸಿದರು. ನಂತರ ಮೆಡಿಕಲ್ ಕಾಲೇಜು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 532.91 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷಣ ಸವದಿ, ಸಚಿವರಾದ ಪ್ರಭು ಚವ್ಹಾಣ್, ಡಾ.ಸುಧಾಕರ್, ಸಂಸದ ಅಮರೇಶ್ವರ ನಾಯಕ, ಶಾಸಕರಾದ ರಾಜುಗೌಡ, ವೆಂಕಟರೆಡ್ಡಿ ಮುದ್ನಾಳ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ:ನೂತನ ಅನುಭವ ಮಂಟಪದ ಭೂಮಿ ಪೂಜೆ ನೆರವೇರಿಸಿದ ಸಿಎಂ

ABOUT THE AUTHOR

...view details