ಯಾದಗಿರಿ: ಕಳೆದ ಒಂದೂವರೆ ವರ್ಷದ ಹಿಂದೆ ಅಪಘಾತದಲ್ಲಿ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಜಿಲ್ಲೆಯ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಸಿಎಂ 5 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರಿಸಿದರು.
ನಿನ್ನೆ ನಡೆದ ಜನತಾ ದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು 30 ಲಕ್ಷಕ್ಕೂ ಹೆಚ್ಚಿನ ಹಣ ಖರ್ಚು ಮಾಡಿದ್ದೇವೆ. ಆದರೂ ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. ಈ ಕುರಿತು ಅಹವಾಲು ಸ್ವೀಕರಿಸಿದ ಕುಮಾರಸ್ವಾಮಿ ಕೂಡಲೇ ಸ್ಪಂದಿಸಿ, ಇಂದು 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದಾರೆ.