ಯಾದಗಿರಿ:ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆಯ ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್13 ರಿಂದ 15ರವರೆಗೆ ನಿರಂತರವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಮಳೆಯಾಗುವ ಸಂಭವ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆಯವರು ಮುನ್ನೆಚ್ಚರಿಕೆ ತೆಗೆದುಕೊಳ್ಳಲು ನಿರ್ದೇಶನ ನೀಡಿರುತ್ತಾರೆ. ಅದರಂತೆ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮನೆಯಿಂದ ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ನಿರ್ಬಂದಿಸಲಾಗಿದೆ. ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ನೀರು ಹರಿದು ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ ನದಿ ಹಾಗೂ ಹಳ್ಳದ ದಡದ ಹತ್ತಿರ ಜನರು ಹಾಗೂ ಜಾನುವಾರುಗಳು ಹೋಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯ ಕಂದಾಯ, ಪೋಲಿಸ್, ಸ್ಥಳೀಯ ಸಂಸ್ಥೆ ಇಲಾಖೆಗಳ ಹಾಗೂ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಪ್ರವಾಹ, ಭಾರಿ ಗಾಳಿ - ಮಳೆ ಬಗ್ಗೆ ಮುನ್ನೆಚ್ಚರಿಕೆ ಕುರಿತು ಗ್ರಾಮಗಳಲ್ಲಿ ಡಂಗೂರ ಸಾರುವಂತೆ ಸೂಚಿಸಿದ್ದಾರೆ.
ಎಚ್ಚರಿಕೆಯಿಂದಿರಲು ಅಧಿಕಾರಿಗಳ ಸೂಚನೆ ಜಿಲ್ಲೆಯಲ್ಲಿ ಕೂವಿಡ್-19, ಪ್ರವಾಹ, ಅತಿವೃಷ್ಠಿ ಹಾಗೂ ನೈಸರ್ಗಿಕ ವಿಕೋಪದ ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253771 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದು. 24 ಗಂಟೆಗಳ ಸಹಾಯವಾಣಿ ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ: 08441-276184, ಮೊಬೈಲ್ ಸಂಖ್ಯೆ: 9741680444, 6361376408 ಅಥವಾ 9986996632ಗೆ ಸಂಪರ್ಕಿಸಬಹುದು.
ಸೇಡಂ: ಕಲಬುರಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದರಿಂದ ತಹಸೀಲ್ದಾರ್ ಬಸವರಾಜ ಬೆಣ್ಣೆ ಶಿರೂರು ತಾಲೂಕಿನ ಜನತೆ ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ. ನೀರು ಹರಿಯುವ ರಸ್ತೆಗಳು ಮತ್ತು ಬ್ರಿಡ್ಜ್ಗಳನ್ನು ದಾಟಲು ವಾಹನ ಸವಾರರು ಸಾಹಸ ಮಾಡಬಾರದು. ಮಳೆಯಿಂದ ಸಂಕಷ್ಟ ಎದುರಿಸುವವರಿಗಾಗಿಯೇ 24 ಗಂಟೆಗಳ ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 08441-276184, ಮೊಬೈಲ್ ಸಂಖ್ಯೆ: 9741680444, 6361376408 ಅಥವಾ 9986996632ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.