ಕರ್ನಾಟಕ

karnataka

ETV Bharat / state

ಗೋಡ್ಸೆ ಕುರಿತ ಬಿಜೆಪಿ ನಾಯಕರ ಹೇಳಿಕೆಗೆ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - ಕಾಂಗ್ರೆಸ್ ಪ್ರತಿಭಟನೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನ ಕೊಂದ ನಾಥುರಾಮ ಗೋಡ್ಸೆಯನ್ನು ಬಿಜೆಪಿ ನಾಯಕರು ಹಾಗೂ ಸಂಸದರು ಮಹಾನ ದೇಶಭಕ್ತ ಎಂದು ಹೇಳಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್ ಪ್ರತಿಭಟನೆ

By

Published : May 19, 2019, 4:06 AM IST

ಯಾದಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನ ಕೊಂದ ನಾಥುರಾಮ ಗೋಡ್ಸೆಯನ್ನು ಬಿಜೆಪಿ ನಾಯಕ ಹಾಗೂ ಸಂಸದ ಮಹಾನ್​ ದೇಶಭಕ್ತ ಎಂದು ಹೇಳಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾದ್ವಿ ಪ್ರಗ್ಯಾ ಸಿಂಗ್, ನಾಥುರಾಮ ಗೋಡ್ಸೆ ಮಹಾನ್ ದೇಶಭಕ್ತ ಎಂದು ಹೇಳಿಕೆ ನೀಡಿದರ ವಿರುದ್ದ ಹರಿಹಾಯ್ದ ಪ್ರತಿಭಟನಾಕಾರರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.‌

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರೀಗೌಡ್ ಹುಲ್ಕಲ್ಲ ‌ನೇತೃತ್ವದಲ್ಲಿ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು, ಬಿಜೆಪಿ ಮಹಾತ್ಮ ಗಾಂಧಿಯವರನ್ನು ಕೊಂದ ದೇಶದ್ರೋಹಿಯನ್ನು ದೇಶಭಕ್ತ ಎಂದು ದೇಶದ‌ ಪ್ರಜೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ನಾಥುರಾಮ ಗೋಡ್ಸೆಯನ್ನು ದೇಶಭಕ್ತ ‌ಎಂದು ಕರೆದ ಬಿಜೆಪಿ‌ ನಾಯಕರ ಮೇಲೆ‌ ಕ್ರೀಮಿನಲ್​ ಮೊಕ್ಕದ್ದಮೆ ದಾಖಲಿಸಿ ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದರು.

ABOUT THE AUTHOR

...view details