ಸುರಪುರ :ನಗರದಲ್ಲಿ ನವಜೋಡಿಗಳಿಬ್ಬರು ವಿಶೇಷ ರೀತಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಕೊರೊನಾ ಕುರಿತು ಜಾಗೃತಿ ಮೂಡಿಸಿ ಇತರರಿಗೆ ಮಾದರಿಯಾಗಿದ್ದಾರೆ.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕೊರೊನಾ ಜಾಗೃತಿ ಮೂಡಿಸಿದ ನವಜೋಡಿ ! - latest corona awareness news
ನಗರದ ಹಳೆ ಬಸ್ ನಿಲ್ದಾಣದ ಬಸವರಾಜ ನಾಯಕ ಹಾಗೂ ವಿಜಯಲಕ್ಷ್ಮಿ ಎಂಬ ನವ ಜೋಡಿಗಳಿಬ್ಬರು ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಮತ್ತು ಇತರ ಕಾರ್ಮಿಕರುಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು.
ನಗರದ ಹಳೆ ಬಸ್ ನಿಲ್ದಾಣದ ಬಳಿ ಬಸವರಾಜ ನಾಯಕ ಹಾಗೂ ವಿಜಯಲಕ್ಷ್ಮಿ ಎಂಬ ನವಜೋಡಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಮತ್ತು ಇತರ ಕಾರ್ಮಿಕರುಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು.
ಸಮಾರಂಭದಲ್ಲಿ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಭಾಗಿಯಾಗಿ ಮಾತನಾಡಿ, ಇಂದು ಬಸವರಾಜ ನಾಯಕ ಹಾಗೂ ವಿಜಯಲಕ್ಷ್ಮಿ ಜೋಡಿಗಳು ಮಾಸ್ಕ್ ವಿತರಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಎಲ್ಲರೂ ಕೊರೊನಾದಿಂದ ದೂರವಿರಲು ಮಾಸ್ಕ್ ಧರಿಸುವಂತೆ ತಿಳಿಸಿದರು.