ಸುರಪುರ:ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಶಾಸಕ ರಾಜುಗೌಡ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದಲ್ಲಿನ ಜನರನ್ನು ಭೇಟಿ ಮಾಡಿ, ಅಲ್ಲದೇ ನಿಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸೂಚಿಸಿದರು.
ಅಧಿಕಾರಿಗಳ ಸಭೆ ಕರೆದ ಶಾಸಕ ರಾಜುಗೌಡ... ಏಕೆಂದರೆ - ಕೊರೊನಾ ವೈರಸ್
ರಾಜ್ಯದಲ್ಲಿ ಕೊರೊನಾ ಶಂಕಿತರ ಸಂಖ್ಯೆ 55ಕ್ಕೆ ಏರಿದ್ದು, ಇನ್ನೂ ಹೆಚ್ಚಾಗುವ ದೃಷ್ಟಿಯಿಂದ ಮುಂಜಾಗೃತ ಕ್ರಮ ಕೈಗೊಳ್ಳುವ ವಿಚಾರವಾಗಿ ಸುರಪುರದಲ್ಲಿ ಶಾಸಕ ರಾಜುಗೌಡ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಎಚ್ಚರ ವಹಿಸುವಂತೆ ಸೂಚಿಸಿದರು.
ಶಾಸಕ ರಾಜುಗೌಡ
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರು, ಎಲ್ಲ ಜನರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ, ಯಾರೂ ಮನೆಯಿಂದ ಹೊರಗೆ ಬರಬೇಡಿ, ಎರಡು ತಿಂಗಳ ದಿನಸಿ ಮನೆಗಳಿಗೆ ಬರಲಿದೆ ಎಂದು ಆಶ್ವಾಸನೆ ಕೊಟ್ಟರು.