ಯಾದಗಿರಿ: ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬಂದ ವಲಸೆ ಕಾರ್ಮಿಕರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗ್ತಿದ್ದು, ಇದೀಗ ಜಿಲ್ಲೆಯ ಶಹಾಪೂರ ಪೊಲೀಸ್ ಠಾಣೆಗೂ ಕೂಡ ಕೊರೊನಾ ವೈರಸ್ ಎಂಟ್ರಿ ಕೊಟ್ಟಿದೆ.
ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೊರೊನಾ ಸೋಂಕು.. ಶಹಾಪೂರ ಠಾಣೆ ಸೀಲ್‌ಡೌನ್.. - ಪೊಲೀಸ್ ಠಾಣೆಗೆ ಎಂಟ್ರಿ ಕೊಟ್ಟ ಕೊರೊನಾ
ಇಷ್ಟು ದಿನ ಶಹಾಪೂರ ತಾಲೂಕಿನ ಕೊಳ್ಳುರ ಬಳಿಯ ಚೆಕ್ ಪೋಸ್ಟ್‌ನಲ್ಲಿ ಕೆಲಸ ಮಾಡಿದ್ದರು. ಇಂದು ಕಾನ್‌ಸ್ಟೆಬಲ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕಿತ್ಸೆಗಾಗಿ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯ ಕೋವಿಡ್- 19 ವಾರ್ಡ್‌ಗೆ ದಾಖಲಿಸಲಾಗಿದೆ.
Police station
29 ವರ್ಷದ ಕಾನ್‌ಸ್ಟೆಬಲ್‌ವೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಅಂತಾ ತಿಳಿದು ಬಂದಿದೆ. ಕೊರೊನಾ ವಾರಿಯರ್ಸ್ ಈ ಕಾನ್‌ಸ್ಟೆಬಲ್, ಇಷ್ಟು ದಿನ ಶಹಾಪೂರ ತಾಲೂಕಿನ ಕೊಳ್ಳುರ ಬಳಿಯ ಚೆಕ್ ಪೋಸ್ಟ್‌ನಲ್ಲಿ ಕೆಲಸ ಮಾಡಿದ್ದರು. ಇಂದು ಕಾನ್‌ಸ್ಟೆಬಲ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕಿತ್ಸೆಗಾಗಿ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯ ಕೋವಿಡ್- 19 ವಾರ್ಡ್‌ಗೆ ದಾಖಲಿಸಲಾಗಿದೆ.
ಇನ್ನು ಸೋಂಕಿಗೆ ತುತ್ತಾದ ಕಾನ್‌ಸ್ಟೆಬಲ್ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯದಲ್ಲಿ ಜಿಲ್ಲಾಡಳಿತ ತೊಡಗಿದೆ. ಶಹಾಪೂರ ಪೊಲೀಸ್ ಠಾಣೆಯನ್ನ ಸೀಲ್‌ಡೌನ್ ಮಾಡುವ ಸಾಧ್ಯತೆಗಳಿವೆ.