ಯಾದಗಿರಿ: ದೆಹಲಿಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮರಳಿದವರು ವೈದ್ಯರ ಸೂಚನೆಗಳನ್ನು ಪಾಲಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.
ಕೊರೊನಾ ಸೋಂಕಿನಿಂದ ಜನ ಭಯ ಪಡುವ ಅವಶ್ಯಕತೆ ಇಲ್ಲ. ಈಗಾಗಲೇ ರಾಜ್ಯದ ಎಲ್ಲೆಡೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವೈರಸ್ ಬಗ್ಗೆ ಜನಜಾಗೃತಿಗಾಗಿ ಜಾಗೃತಿ ಕರ್ನಾಟಕ ಯುಟೂಬ್ ಚಾನೆಲ್ ಆರಂಭ ಮಾಡಲಾಗಿದೆ. ಇದರಿಂದ ರಾಜ್ಯದ ಜನರಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಅರಿವು ಮೂಡಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.