ಯಾದಗಿರಿ:ಜಿಲ್ಲಾಡಳಿತ ಆದೇಶಿಸಿರುವ ಕೊರೊನಾ ವೈರಸ್ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸದಿದ್ದರೂ ಅವರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಜಿಲ್ಲಾಡಳಿತದ ಆದೇಶಕ್ಕೆ ಸೊಪ್ಪು ಹಾಕದ ಜನ: ಯಾದಗಿರಿಯಲ್ಲಿ ಮುಂದುವರಿದ ಕೊರೊನಾಘಾತ
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದ್ರೆ ಸರ್ಕಾರದ ಆದೇಶಕ್ಕೆ ಜಿಲ್ಲೆಯ ಜನ ಸ್ಪಂದಿಸದೇ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುವಂತೆ ವರ್ತಿಸಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 939 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 822 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಆದರೆ ಇನ್ನೂ 116 ಪ್ರಕರಣಗಳು ಸಕ್ರಿಯವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗ ಈ ಕಿಲ್ಲರ್ ವೈರಸ್ ಸಮುದಾಯದ ಹಂತಕ್ಕೂ ವ್ಯಾಪಿಸಿದೆ.
ಜಿಲ್ಲಾದ್ಯಂತ 78 ನಿರ್ಬಂಧಿತ ಪ್ರದೇಶಗಳನ್ನ ಘೋಷಿಸುವ ಮೂಲಕ ಜಿಲ್ಲಾಡಳಿತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಆದ್ರೆ ಸರ್ಕಾರದ ಆದೇಶಕ್ಕೆ ಜಿಲ್ಲೆಯ ಜನ ಸ್ಪಂದಿಸದೇ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುವಂತೆ ವರ್ತಿಸಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ.