ಯಾದಗಿರಿಯಲ್ಲಿಂದು ಸೋಂಕಿಗೆ ಇಬ್ಬರು ಸಾವು: 79 ಹೊಸ ಕೋವಿಡ್ ಪ್ರಕರಣ ದಾಖಲು - ಕೊರೊನಾ ಹೊ ಪ್ರಕರಣಗಳು
ಯಾದಗಿರಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಾಗೂ ಹೊಸದಾಗಿ ಜಿಲ್ಲೆಯಲ್ಲಿ 79 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಯಾದಗಿರಿ:ಜಿಲ್ಲೆಯಲ್ಲಿಂದು ಹೊಸದಾಗಿ 79 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6341 ಕ್ಕೆ ಏರಿಕೆಯಾಗಿದ್ದು, ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದಾರೆ..
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 149 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಲ್ಲಿಯವರೆಗೆ 5041 ಜನ ಗುಣಮುಖರಾಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳಲ್ಲಿ 1255 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆಯಾಗಿ ಕೊರೊನಾ ಸೋಂಕಿಗೆ 45 ಜನ ಬಲಿಯಾಗಿದ್ದಾರೆ.
ಇಂದು ಪತ್ತೆಯಾದ ಸೋಂಕಿತರಿಗೆ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆ ಸೇರಿದಂತೆ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.