ಯಾದಗಿರಿಯಲ್ಲಿ ಇಂದು ಹೊಸದಾಗಿ 151 ಜನರಿಗೆ ಸೋಂಕು ದೃಢ
ಯಾದಗಿರಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 151 ಜನರಿಗೆ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1415 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾದಗಿರಿಯಲ್ಲಿ ಹೊಸ ಕೊರೊನಾ ಪ್ರಕರಣಗಳು ಪತ್ತೆ ಸುದ್ದಿ
ಯಾದಗಿರಿ:ಜಿಲ್ಲೆಯಲ್ಲಿ ಇಂದು ಹೊಸದಾಗಿ 151 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6788ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 22 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಇಲ್ಲಿಯವರೆಗೆ 5327 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೊಂಕಿಗೆ ಇದುವರೆಗೆ ಒಟ್ಟು 46 ಜನ ಅಸುನೀಗಿದ್ದಾರೆ.
ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1415 ಮಂದಿ ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.