ಕರ್ನಾಟಕ

karnataka

ETV Bharat / state

'ಮಹಾನಾಯಕ'ನಿಗಾಗಿ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ: ವಿದ್ಯುತ್ ಕಡಿತಗೊಳಿಸದಂತೆ ಅಧಿಕಾರಿಗಳಿಗೆ ತಾಕೀತು - surapur protest news

ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಭೀಮ್​ರಾವ್​ ಅಂಬೇಡ್ಕರ್ ಅವರ ಜೀವನಾಧಾರಿತ 'ಮಹಾನಾಯಕ' ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ‌, ಈ ಧಾರಾವಾಹಿಯನ್ನ ನಾಡಿನ ಕೋಟ್ಯಂತರ ಅಂಬೇಡ್ಕರ್​​ ಅಭಿಮಾನಿಗಳು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

corporate members protest
'ಮಹಾನಾಯಕ'ನಿಗಾಗಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

By

Published : Jul 8, 2020, 2:19 PM IST

ಸುರಪುರ : ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ಗಂಟೆಯವರೆಗೆ ಜೀ ಕನ್ನಡದಲ್ಲಿ ಪ್ರಸಾರವಾಗುವ ಮಹಾನಾಯಕ ಧಾರಾವಾಹಿ ಸಂದರ್ಭದಲ್ಲಿ ವಿದ್ಯುತ್​ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಕಚೇರಿ ಮುಂದೆ ನಗರಸಭೆ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಭೀಮ್​ರಾವ್​ ಅಂಬೇಡ್ಕರ್ ಅವರ ಜೀವನಾಧಾರಿತ 'ಮಹಾನಾಯಕ' ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ‌. ಈ ಧಾರಾವಾಹಿ ನಾಡಿನ ಕೋಟ್ಯಂತರ ಜನ ಅಂಬೇಡ್ಕರ್​​ ಅಭಿಮಾನಿಗಳು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ಹಾಗಾಗಿ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ಗಂಟೆಯವರೆಗೆ ವಿದ್ಯುತ್ ಕಡಿತ ಮಾಡಬಾರದು ಎಂದು ಆಗ್ರಹಿಸಿ, ಮನವಿ ಪತ್ರ ನೀಡಿದರು. ಒಂದು ವೇಳೆ ವಿದ್ಯುತ್ ಕಡಿತಗೊಳಿಸಿದಲ್ಲಿ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ABOUT THE AUTHOR

...view details