ಯಾದಗಿರಿ: ಜಿಲ್ಲೆಯಲ್ಲಿ 47 ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 2288 ಮಂದಿ ಗುಣಮುಖರಾಗಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಇಂದು 83 ಕೋವಿಡ್ ಪ್ರಕರಣಗಳು ದೃಢ - Yadagiri latest news
ಯಾದಗಿರಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 83 ಕೋವಿಡ್ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 3421 ಕ್ಕೆ ಏರಿಕೆಯಾಗಿದೆ. ಸೋಂಕು ಪತ್ತೆಯಾದವರನ್ನೆಲ್ಲ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಹೊಸದಾಗಿ 83 ಕೋವಿಡ್ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 3421 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳಲ್ಲಿ 1114 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ವೈರಸ್ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ 19 ಜನ ಮೃತಪಟ್ಟಿದ್ದಾರೆ. ಇಂದು ವರದಿಯಾದ 83 ಪ್ರಕರಣಗಳಲ್ಲಿ 36 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶದವರಾದರೆ, 23 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರಾಗಿದ್ದಾರೆ. ಇನ್ನುಳಿದ 24 ಪ್ರಕರಣಗಳು ಸುರಪೂರ ನಗರ ಹಾಗೂ ಗ್ರಾಮೀಣ ಪ್ರದೇಶದವರಾಗಿದ್ದಾರೆ. ಸೋಂಕು ಪತ್ತೆಯಾದವರನ್ನೆಲ್ಲ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ.