ಯಾದಗಿರಿ:ಶಾರ್ಟ್ ಸರ್ಕ್ಯೂಟ್ನಿಂದ ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ಗಳು ಸ್ಫೋಟಗೊಂಡಿರುವ ಘಟನೆ ಜಿಲ್ಲೆಯ ಸುರಪೂರ ತಾಲೂಕಿನ ಕೆಂಬಾವಿ ಗ್ರಾಮದಲ್ಲಿ ನಡೆದಿದೆ.
ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟ: ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿ - ಶಾರ್ಟ್ ಸರ್ಕ್ಯೂಟ್
ಹೋಟೆಲ್ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು 1 ಲಕ್ಷಕ್ಕೂ ಅಧಿಕ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಬೆಂಕಿಗಾಹುತಿ
ವಿಶ್ವನಾಥ್ ಯಾಳಗಿ ಎಂಬುವರಿಗೆ ಸೇರಿದ ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.