ಕರ್ನಾಟಕ

karnataka

ETV Bharat / state

ಕೋವಿಡ್​​-19 ಟೆಸ್ಟ್ ಲ್ಯಾಬ್​​​ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ - Yadagiri DC M Koormarao

ಯಾದಗಿರಿಯ ಮುದ್ನಾಳ ಬಳಿ ಹೊಸದಾಗಿ ಸ್ಥಾಪನೆಯಾಗಿರುವ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್​​​​​ ಕೋವಿಡ್​-19 ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಸೂಚಿಸಿದರು.

Covid 19 test lab in yadgiri
ಕೋವಿಡ್​​-19 ಟೆಸ್ಟ್ ಲ್ಯಾ​​​ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

By

Published : May 7, 2020, 11:15 PM IST

ಯಾದಗಿರಿ: ಹೊಸದಾಗಿ ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್​​-19 ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಮುದ್ನಾಳ ಸಮೀಪದ ನೂತನ ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಅವರು, ಕೋವಿಡ್-19 ಟೆಸ್ಟ್ ಲ್ಯಾಬ್ ಸ್ಥಾಪನೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೈಪ್‍ಲೈನ್ ಕಾಮಗಾರಿ ಕೈಗೊಳ್ಳಲು ಪರಿಶೀಲನೆ ನಡೆಸಿದರು. ಜಿಲ್ಲಾಡಳಿತದ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕಿದೆ. ಈ ನಿಟ್ಟಿನಲ್ಲಿ ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚಾಗಿ ಕೈಗೊಳ್ಳಬೇಕಿರುವ ಕಾರಣ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಬೇಕಾದ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಾರಾಯಣಪ್ಪ ಕೆ.ಹೆಚ್.​​​​​​ಎಸ್​​​.ಡಿ.ಆರ್.​ಪಿ ಕಾರ್ಯ ನಿರ್ವಾಹಕ ಇಂಜಿನಿಯರ್​​​​ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.

For All Latest Updates

ABOUT THE AUTHOR

...view details