ಕರ್ನಾಟಕ

karnataka

ETV Bharat / state

ಆರ್ಥಿಕ ಮತ್ತು ಸಾಮಾಜಿಕ ನೆರವಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ: ಡಿಸಿಎಂ ಲಕ್ಷ್ಮಣ ಸವದಿ - ಡಿಸಿಎಂ ಲಕ್ಷ್ಮಣ ಸವದಿ

ಎಲ್ಲರಿಗೂ ಮಂತ್ರಿ ಆಗಬೇಕು ಏನಾದರು ಸಾಧನೆ ಮಾಡಬೇಕು ಎನ್ನುವ ಆಸೆ ಇರುತ್ತದೆ. ವಿಶ್ವನಾಥ್ ಅವರಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಅವರ ಪರವಾಗಿ ನಮ್ಮ ಪಕ್ಷ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

DCM Laxman Sawadic
ಡಿಸಿಎಂ ಲಕ್ಷ್ಮಣ ಸವದಿ

By

Published : Dec 3, 2020, 7:07 PM IST

ಯಾದಗಿರಿ: 'ಸಿಪಿ ಯೋಗೇಶ್ವರ ಅವರಿಗೆ ಸಚಿವರನ್ನಾಗಿ ಮಾಡುವುದು ಆತುರದ ನಿರ್ಧಾರ ಎಂದ ವಿಶ್ವನಾಥ್ ಹೇಳಿಕೆಗೆ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು, 'ಎಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ, ಆಪೇಕ್ಷೆ, ನಿರೀಕ್ಷೆ ಇರುತ್ತೆ. ನಿಮಗೂ ಬಿಟ್ಟಿಲ್ಲ ನಮಗೂ ಬಿಟ್ಟಿಲ್ಲ' ಎಂದರು.

ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ

ಪಕ್ಷದ ಗ್ರಾಮ ಸ್ವಾರಜ್ಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿಸಿಎಂ ಮಾಧ್ಯಮಗಳ ಜತೆ ಮಾತನಾಡಿ, ಎಲ್ಲರಿಗೂ ಮಂತ್ರಿ ಆಗಬೇಕು ಏನಾದರು ಸಾಧನೆ ಮಾಡಬೇಕು ಎನ್ನುವ ಆಸೆ ಇರುತ್ತದೆ. ವಿಶ್ವನಾಥ್ ಅವರಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಅವರ ಪರವಾಗಿ ನಮ್ಮ ಪಕ್ಷ ಗಟ್ಟಿಯಾಗಿ ನಿಲ್ಲುತ್ತದೆ. ಅವರಿಗೆ ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುತ್ತೆ ಎನ್ನುವ ನಂಬಿಕೆಯಿದೆ. ಅವರು ಹಿರಿಯರು ಇದ್ದಾರೆ ಯಾವುದೇ ಕಾರಣಕ್ಕೂ ವಿಚಲಿತರಾಗಬಾರದು. ವಿಶ್ವನಾಥ್ ಅವರಿಗೆ ಮುಂದೆ ಒಳ್ಳೆಯ ಭವಿಷ್ಯವಿದೆ ಎಂದು ಪಕ್ಷದ ನಾಯಕರ ನಡುವಿನ ಗೊಂದಲವನ್ನು ಸಮರ್ಥಿಸಿಕೊಂಡರು.

ಯೋಗೇಶ್ವರ್ ಮಂತ್ರಿ ಮಾಡಲು ಅವಸರವೇಕೆ?: ಹೆಚ್.ವಿಶ್ವನಾಥ್ ಪ್ರಶ್ನೆ

ಆರ್ಥಿಕ ಮತ್ತು ಸಮಾಜಿಕವಾಗಿ ಅವರಿಗೆ ನೆರವಾಗಲು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಇದು ಭಾಷೆ ಮೇಲೆ ಮಾಡಿರುವಂತ ಪ್ರಾಧಿಕಾರ ಅಲ್ಲ. ತಪ್ಪಾಗಿ ಅರ್ಥೈಸಿಕೊಂಡು ಬಂದ್ ಮಾಡೋದು ಬೇಡ ಎಂದು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದರು.

ವರ್ತೂರ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗುವುದು ಎಂದರು.

ABOUT THE AUTHOR

...view details