ಸುರಪುರ: ಎರಡು ದಿನದ ಹಿಂದೆ ಕೃಷ್ಣಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಚಂದಪ್ಪ ಕೊಂಡಿಕಾರ ಎಂಬಾತನ ಶವ ಇಂದು ಪತ್ತೆಯಾಗಿದೆ.
ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ - ಸುರಪುರ ಪೊಲೀಸ್ ಠಾಣೆ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷ್ಣಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದು ಪತ್ತೆಯಾಗಿದೆ.
ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ತಾಲೂಕಿನ ಶೆಳ್ಳಗಿ ಗ್ರಾಮದ ಮಂಟಪ ಬಳಿ ಮೂರು ಮಂದಿ ನದಿಗೆ ಈಜಲು ತೆರಳಿದ್ದರು. ಅಗ್ನಿಶಾಮಕ ದಳ ಮತ್ತು ಮೀನುಗಾರರು ಎರಡು ದಿನಗಳಿಂದ ಸತತ ಪ್ರಯತ್ನ ನಡೆಸಿದ್ದರು ಸಹ ಶವ ಪತ್ತೆಯಾಗಿರಲಿಲ್ಲ.
ಸ್ಥಳಕ್ಕೆ ತಹಶಿಲ್ದಾರ್ ನಿಂಗಣ್ಣ ಬಿರಾದಾರ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.