ಕರ್ನಾಟಕ

karnataka

ETV Bharat / state

ಕೊರೊನಾ ವಾರಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಕಾನ್ಸ್​ಟೇಬಲ್​ ಉಸಿರು ಕಸಿದುಕೊಂಡ ಡೆಡ್ಲಿ ವೈರಸ್​

ಕೊರೊನಾ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ವಾರಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಅವರ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Deadly virus attack on police constable in Yadagiri
ಮೃತ ಕಾನ್ಸ್​ಟೇಬಲ್​ (ಸಂಗ್ರಹ ಚಿತ್ರ)

By

Published : Apr 26, 2021, 6:56 PM IST

ಯಾದಗಿರಿ:ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು ಮಹಾಮಾರಿ ವೈರಸ್​ಗೆ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಬಲಿಯಾಗಿದ್ದಾರೆ. ಘಟನೆಯಿಂದ ಜಿಲ್ಲಾ ಪೊಲೀಸ್​ ವಲಯಗಳಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯ ಶಹಾಪುರ ಪೊಲೀಸ್​ ಠಾಣೆಯ ಶರಣಪ್ಪ ಹಂಗರಗಿ (28) ಮೃತ ಕಾನ್ಸ್​ಟೇಬಲ್ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೋವಿಡ್​ಗೆ ಪೊಲೀಸ್​ ಅಧಿಕಾರಿ ಬಲಿ.. ಈವರೆಗೂ ಸೋಂಕಿಗೆ 3 ಸಿಬ್ಬಂದಿ ಸಾವು

ಕಲಬುರಗಿ ಜಿಲ್ಲೆಯ ಏಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದವರಾದ ಶರಣಪ್ಪ, ಕಳೆದ ಎರಡು ವರ್ಷಗಳಿಂದ ಶಹಾಪುರ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೊರೊನಾ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನ ಕಲಬುರಗಿ ಜೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಕಾನ್ಸ್​ಟೇಬಲ್​ (ಸಂಗ್ರಹ ಚಿತ್ರ)

ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶರಣಪ್ಪ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗುತ್ತಿದೆ. ಕೊರೊನಾ ವಾರಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಶರಣಪ್ಪ ಅವರ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ABOUT THE AUTHOR

...view details