ಯಾದಗಿರಿ:ಸರ್ಕಾರದ ವತಿಯಿಂದ ವಿತರಿಸಲಾಗುತ್ತಿರುವ ಉಚಿತ ಲ್ಯಾಪ್‌ಟಾಪ್ ಯೋಜನೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿಸರ್ಕಾರಿ ಪ್ರಾಥಮಿಕ ದರ್ಜೆ ಕಾಲೇಜು ವಿದ್ಯಾರ್ಥಿಗಳುಪ್ರತಿಭಟನೆ ನಡೆಸಿದರು.
ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ತಾರತಮ್ಯ: ವಿದ್ಯಾರ್ಥಿಗಳ ಪ್ರತಿಭಟನೆ - ಯಾದಗಿರಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸರ್ಕಾರಿ ಪ್ರಾಥಮಿಕ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, 2017-18ನೇ ಸಾಲಿನಲ್ಲಿ ದಾಖಲಾದವರಿಗೆ ಲ್ಯಾಪ್‌ಟಾಪ್ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಇದುವರೆಗೂ ಲ್ಯಾಪ್‌ಟಾಪ್ ನೀಡಿಲ್ಲ. ಈ ಹಿಂದೆಯೂ ದಾಖಲಾದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗಿದೆ. ಜೊತೆಗೆ 2019-20ನೇ ಸಾಲಿನ ವಿದ್ಯಾರ್ಥಿಗಳಿಗೂ ಸಹ ವಿತರಿಸಲಾಗಿದೆ. ಆದರೆ, 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾರತಮ್ಯ ಧೋರಣೆಯನ್ನು ವಿರೋಧಿಸಿದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಗೆ ಕುಳಿತರು. ನಗರದ ಸರ್ಕಾರಿ ಪದವಿ ಕಾಲೇಜಿನಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಅವರಿಗೆ ಮನವಿ ಪತ್ರ ಸಲ್ಲಿಸಿದರು.