ಯಾದಗಿರಿ:ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ ಕೃಷ್ಣ ನದಿಗೆ ಭಾರಿ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆ ಜನರನ್ನು ನದಿ ತೀರದ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.
ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 3,97,100 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದ್ದು, ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮವು ಮುಳಗಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಜಿಲ್ಲಾಡಳಿತ ಗ್ರಾಮವನ್ನು ಸ್ಥಳಾಂತರಿಸಲು ಮುಂದಾಗಿದೆ.