ಕರ್ನಾಟಕ

karnataka

ETV Bharat / state

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ - membership campaign

ದೇಶದಲ್ಲಿನ ಎಲ್ಲಾ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ರಾಹುಲ್ ಗಾಂಧಿಯವರ ಕೈ ಬಲಪಡಿಸೋಣ - ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್

District Youth Congress activists membership campaign
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ

By

Published : Nov 5, 2020, 8:17 PM IST

Updated : Nov 5, 2020, 9:03 PM IST

ಸುರಪುರ :ನಗರದ ವಸಂತ ಮಹಲ್ ಕಾಂಗ್ರೆಸ್ ಕಚೇರಿಯಲ್ಲಿ ಯಾದಗಿರಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಹಾಗೂ ಜಾಗೃತಿ ಸಮಾವೇಶವನ್ನು ನಡೆಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕೇವಲ ಸುಳ್ಳು ಭರವಸೆಗಳಲ್ಲಿ ಕಾಲಹರಣ ಮಾಡುತ್ತಿದೆ. ದೇಶದ ಅಭಿವೃದ್ಧಿ ಎಂಬುದು ಕಾಂಗ್ರೆಸ್​​ನಿಂದ ಮಾತ್ರ ಸಾಧ್ಯ. ಆದ್ದರಿಂದ ದೇಶದ ಎಲ್ಲ ಯುವಕರು ಸೇರಿ ರಾಹುಲ್ ಗಾಂಧಿಯವರ ಕೈ ಬಲಪಡಿಸೋಣ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ರಾಜಾ ಕುಮಾರ ನಾಯಕ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಕರೆ ನೀಡಿದಂತೆ ಜಿಲ್ಲೆಯಲ್ಲಿ ಈಗಾಗಲೇ 5 ಸಾವಿರ ಕಾರ್ಯಕರ್ತರ ಸದಸ್ಯತ್ವ ಮಾಡಿಸಲಾಗಿದೆ. ಇನ್ನೂ 2 ರಿಂದ 3 ಸಾವಿರ ಸದಸ್ಯತ್ವ ಮಾಡುವುದಾಗಿ ತಿಳಿಸಿದರು. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಏನೇ ಸಮಸ್ಯೆ ಇದ್ದರೂ ಗಮನಕ್ಕೆ ತಂದಲ್ಲಿ ತಕ್ಷಣಕ್ಕೆ ಅವರ ಬೆಂಬಲಕ್ಕೆ ಇರುವುದಾಗಿ ತಿಳಿಸಿದರು.

ಈ ವೇಳೆ ಮುಖಂಡರಾದ ರಾಜ ವೇಣುಗೋಪಾಲ್​ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ್ ಬಾಚಿಮಟ್ಟಿ ಸೇರಿದಂತೆ ಇತರರು ಹಾಜರಿದ್ದರು.

Last Updated : Nov 5, 2020, 9:03 PM IST

ABOUT THE AUTHOR

...view details