ಕರ್ನಾಟಕ

karnataka

ETV Bharat / state

ಗುರುಮಠಕಲ್​​: ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸೈದಾಪೂರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಯೋಧ್ಯಾ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಸಲುವಾಗಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

donations-collected-to-construction-of-ayodhya-ram-mandir
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಚಾಲನೆ

By

Published : Jan 18, 2021, 6:45 AM IST

ಗುರುಮಠಕಲ್ (ಯಾದಗಿರಿ):ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿನ್ನೆಲೆ, ಗುರುಮಠಕಲ್ ತಾಲೂಕಿನ ಸೈದಪೂರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಈ ವೇಳೆ ಮಾತನಾಡಿದ ವಿದ್ಯಾವರ್ಧಕ ಪಿಯು ಕಾಲೇಜಿನ ಪ್ರಾಂಶುಪಾಲ ಜಿ.ಎಮ್ ಗುರುಪ್ರಸಾದ್​, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಭಾರತೀಯರ ಕನಸು. ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಕೋಟ್ಯಂತರ ಭಾರತೀಯರ ತ್ಯಾಗ ಬಲಿದಾನದಿಂದ ಇದು ಸಾಕಾರಗೊಳ್ಳುತ್ತಿರುವುದು ಸಂತೋಷದ ವಿಷಯ.

ಓದಿ:ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡ್ತಾರಾ ಸಿಎಂ?

ಶ್ರೀರಾಮ ಎಲ್ಲರ ದೃಷ್ಠಿಯಲ್ಲಿ ಆದರ್ಶ ಪುರುಷ ಮತ್ತು ಮರ್ಯಾದಾ ಪುರುಷೊತ್ತಮ ಆಗಿದ್ದಾರೆ. ಜಾತಿ, ಧರ್ಮ, ಪಕ್ಷ ಎಲ್ಲವನ್ನ ಬದಿಗಿಟ್ಟು ಎಲ್ಲರೂ ತಮ್ಮ ಕೈಲಾದಷ್ಟು ಧನಸಹಾಯ ಮಾಡಬಹುದಾಗಿದೆ. ಈ ಭಾಗದ ಯುವಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details