ಯಾದಗಿರಿ:ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಗಪ್ರಿಯಾ ಆರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಯಾದಗಿರಿ: ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಗಪ್ರಿಯಾ ಅಧಿಕಾರ ಸ್ವೀಕಾರ - ಯಾದಗಿರಿ
ಯಾದಗಿರಿ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರಿಂದ ಡಾ. ರಾಗಪ್ರಿಯಾ ಅವರು ಇಂದು ಅಧಿಕಾರ ಸ್ವೀಕರಿಸಿದರು.
Ragapriya
ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಎಂ. ಕೂರ್ಮಾರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ 2011ರ ಐಎಎಸ್ ಬ್ಯಾಚ್‍ನ ಅಧಿಕಾರಿಯಾಗಿರುವ ಡಾ. ರಾಗಪ್ರಿಯಾ ಆರ್ ಅವರನ್ನು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ನಿಯೋಜಿಸಿ ಸರ್ಕಾರ ಹೊರಡಿಸಿದ ಆದೇಶದಂತೆ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಡಾ. ರಾಗಪ್ರಿಯಾ ಅವರು ಈ ಮೊದಲು ಕಲಬುರಗಿ ಜಿಲ್ಲೆಯ ಜೆಸ್ಕಾಂ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.