ಯಾದಗಿರಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಜಯಭೇರಿ ಬಾರಿಸಲಿದ್ದಾರೆ ಎಂದು ಸುರುಪುರ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.
ಡಾ. ಉಮೇಶ್ ಜಾಧವ್ ಸೋಲಿಲ್ಲದ ಸರದಾರ. ಈ ಬಾರಿ ಮಲ್ಲಿಕಾರ್ಜುನ ಖರ್ಗೆಯವರನ್ನ ಸೋಲಿಸುವ ಮುಖಾಂತರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಮಾಡಲಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಪರೋಕ್ಷವಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್ ನೀಡಿದ್ದಾರೆ.
ಬಿಜೆಪಿಯಲ್ಲಿ ಹಿರಿಯರಾಗಿದ್ದ ಕೆ.ಬಿ ಶಾಣಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಕ್ಕೆರಾಜುಗೌಡಅಸಮಾಧಾನ ವ್ಯಕ್ತಪಡಿಸಿದರು. ಇನ್ನು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಆಭ್ಯರ್ಥಿ ರಾಜ ಅಮರೇಶ್ ನಾಯಕ ಅವರು ಕಾಂಗ್ರೆಸ್ ಹಾಲಿ ಸಂಸದ ಬಿ.ವಿ ನಾಯಕ ಅವರನ್ನ ಸೋಲಿಸುವ ಮುಖಾಂತರ ಬಿಜೆಪಿ ಹೊಸ ಖಾತೆ ತೆರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಎರಡು ಬಾರಿ ಸಂಸದರಾಗಿ, 9 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ಕೂಡ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ ಎಂದು ಶಾಸಕ ರಾಜುಗೌಡ ಆರೋಪಿಸಿದರು.