ಯಾದಗಿರಿ: ಜಿಲ್ಲೆಯ ವಡಿಗೇರಾ ತಾಲೂಕಿನ ಐಕೂರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಡಿಯುವ ನೀರಿಗೆ ಹಾಹಾಕಾರ:ಗ್ರಾ.ಪಂಚಾಯತ್ ಗೆ ಬೀಗ ಜಡಿದು ಪ್ರತಿಭಟನೆ - kannadanews
ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಜನ ಗ್ರಾಮ ಪಂಚಾಯತ್ಗೆ ಬೀಗ ಜಡಿದು ಪ್ರತಿಭಟನೆ ನಡೆಸುವ ಮೂಲಕ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಕೂರ ಗ್ರಾಮ ಪಂಚಾಯತ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕುಡಿಯುವ ನೀರನ್ನು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆಗ್ರಹಿಸಿದರು. ಐಕೂರ ಗ್ರಾಮವು ಸಂಪೂರ್ಣವಾಗಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮದಲ್ಲಿ ಕುಡಿಯುವ ನೀರು ಇಲ್ಲದೆ ಜನರು ಪರದಾಡುತ್ತಿದ್ದಾರೆ. ಕಾಲೋನಿಯಲ್ಲಿರುವ ರಸ್ತೆ , ಒಳಚರಂಡಿ ಸ್ವಚ್ಛತೆಯಿಲ್ಲದೆ ದುವಾರ್ಸನೆ ಬೀರುತ್ತಿದೆ.
ಅಲ್ಲದೇ ಐಕೂರ ಗ್ರಾಮ ಪಂಚಾಯ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕೆಲಸಗಳು ನಾಮಕವಾಸ್ತೆಯಾಗಿದ್ದು ಅಧಿಕಾರಿಗಳು ಬೋಗಸ್ ಬಿಲ್ಲು ಎತ್ತಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಬೇಕು ಹಾಗೂ ನಿರ್ಲಕ್ಷ್ಯ ತೋರುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.