ಸುರಪುರ :ಅಯೋಧ್ಯೆಯ ರಾಮಮಂದಿರ ನಿರ್ಮಾಣ ಸ್ಥಳದಲ್ಲಿನ ಬುದ್ಧ ಸ್ತೂಪಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ವತಿಯಿಂದ ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅಯೋಧೈಯಲ್ಲಿ ಸಿಕ್ಕಿರುವ ಬುದ್ಧ ಸ್ತೂಪಗಳನ್ನು ರಕ್ಷಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ ಡಿಎಸ್ಎಸ್
ರಾಮಮಂದಿರ ನಿರ್ಮಾಣ ಸ್ಥಳದಲ್ಲಿ ಬುದ್ಧನ ಸ್ತೂಪಗಳು ಸಿಕ್ಕಿದ್ದು, ಅವುಗಳನ್ನು ಅದೇ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕು ಮತ್ತು ಆ ಸ್ಥಳವನ್ನು ರಾಷ್ಟ್ರೀಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಒತ್ತಾಯಿಸಿದೆ.
ತಹಸಿಲ್ದಾರ್ ಕಚೇರಿ ಮುಂದೆ ಡಿಎಸ್ಎಸ್ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ರಾಮಮಂದಿರ ನಿರ್ಮಾಣ ಸ್ಥಳದಲ್ಲಿ ಬುದ್ಧನ ಸ್ತೂಪಗಳು ಸಿಕ್ಕಿವೆ. ಅವುಗಳನ್ನು ಅದೇ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕು ಮತ್ತು ಆ ಸ್ಥಳವನ್ನು ರಾಷ್ಟ್ರೀಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಕ್ರಾಂತಿ ಆಗ್ರಹಿಸಿದರು.
ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ, ನಂತರ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಸೋಫಿಯಾ ಸುಲ್ತಾನ್‌ರ ಮೂಲಕ ಸಲ್ಲಿಸಿದರು.