ಕರ್ನಾಟಕ

karnataka

ETV Bharat / state

ಸಾಲ ಬಾಧೆ ತಾಳದೆ ಆತ್ಮಹತ್ಯೆಗೆ ಶರಣಾದ ಯಾದಗಿರಿ ರೈತ - ರೈತ ಆತ್ಮಹತ್ಯೆ ಸುದ್ದಿ ಯಾದಗಿರಿ

ಸಾಲ ಬಾಧೆ ತಾಳಲಾರದೆ ಅರಕೇರಾ ಕೆ ಗ್ರಾಮದ ರೈತ ಹನುಮಂತ ಭಂಡಾರಿ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಹಾಗೂ ಕೈಸಾಲ ಸೇರಿ ಒಟ್ಟು 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ತನ್ನ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿತ್ತು. ಇದರಿಂದ ತೀವ್ರ ಮನನೊಂದು ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

yadgiri
ಆತ್ಮಹತ್ಯೆಗೆ ಶರಣಾದ ರೈತ

By

Published : Jan 9, 2020, 6:12 AM IST

ಯಾದಗಿರಿ:ಸಾಲ ಬಾಧೆ ತಾಳಲಾರದೆ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರಕೇರಾ ಕೆ ಗ್ರಾಮದಲ್ಲಿ ನಡೆದಿದೆ.

ರೈತ ಹನುಮಂತ ಭಂಡಾರಿ (45) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ಜಮೀನಿನಲ್ಲಿ ವಿಷ ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪಿದ್ದಾನೆ. ಬ್ಯಾಂಕ್ ಹಾಗೂ ಕೈಸಾಲ ಸೇರಿ ಒಟ್ಟು 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ತನ್ನ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿತ್ತು ತೀವ್ರ ಮನನೊಂದು ಸಾಲ ಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಮೌಖಿಕವಾಗಿ ಸಾಲ ಮರುಪಾವತಿಸುವಂತೆ ಒತ್ತಾಯ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details