ಯಾದಗಿರಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಡಗೇರಾದಲ್ಲಿ ರೈತ ಆತ್ಮಹತ್ಯೆ - undefined
ಬ್ಯಾಂಕ್ವೊಂದರಲ್ಲಿ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯಾದಗರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
![ಸಾಲಬಾಧೆ ತಾಳಲಾರದೆ ವಡಗೇರಾದಲ್ಲಿ ರೈತ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-3769205-thumbnail-3x2-ydr.jpg)
ರೈತ ಆತ್ಮಹತ್ಯೆ
ವಡಗೇರಾ ನಿವಾಸಿ ಪೋಬರಾಯ (60) ತನ್ನ ಜಮೀನಿನಲ್ಲಿ ನೇಣಿಗೆ ಶರಣಾಗಿರುವ ರೈತ. ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಕೈ ಸಾಲವನ್ನು ಪಡೆದುಕೊಂಡಿದ್ದ ಪೋಬರಾಯ, ಸಾಲಗಾರರ ಕಿರುಕುಳ ತಾಳಲಾರದೆ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.