ಯಾದಗಿರಿ :ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡರ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - yadagiri
ಸಾಲ ಪಡೆದು ತೀರಿಸಲಾಗದೆ ರೈತನೋರ್ವ ಯಾದಗಿರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-3880849-thumbnail-3x2-ydr.jpg)
ರೈತ ಆತ್ಮಹತ್ಯೆ.
ಈರಪ್ಪ ಕನಕಗಿರಿ( 49) ಆತ್ಮಹತ್ಯೆ ಮಾಡಿಕೊಂಡ ರೈತ. ಖಾಸಗಿ ಹಾಗೂ ಸರಕಾರಿ ಬ್ಯಾಂಕಿನಿಂದ ಸಾಲವನ್ನು ಪಡೆದುಕೊಂಡಿದ್ದ ಈರಪ್ಪ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷವನ್ನು ಸೇವಿಸಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ವಿಷ ಸೇವಿಸಿ ರೈತ ಆತ್ಮಹತ್ಯೆ
ಸದ್ಯ ಈ ಪ್ರಕರಣ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.