ಸುರಪುರ:ಯಾದಗಿರಿ ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ನಡೆಸಿ ನಾಳೆ ನಡೆಯುವ ರಾಜ್ಯ ಬಂದ್‌ಗೆ ಬೆಂಬಲಿಸುವುದಾಗಿ ಘೋಷಿಸಿದರು.
ಬಂದ್‌ಗೆ ರೈತ ಸಂಘಟನೆಗಳ ಬೆಂಬಲ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್‌ಗೆ ಯಾದಗಿರಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನೆಲೆ ಯಾದಗಿರಿ ನಗರದಲ್ಲಿ ರೈತ ಪರ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಯಾದಗಿರಿ ಜಿಲ್ಲೆಯಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತದೆ. ನಾಳೆ ಜಿಲ್ಲೆ ಸಂಪೂರ್ಣ ಬಂದಾಗಲಿದೆ. ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ನಗರದ ಸುಭಾಷ್ ವೃತ್ತದಿಂದ ಮಾರ್ಕೆಟ್ನ ಗಾಂಧಿ ವೃತ್ತದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯ ಒಟ್ಟು 22 ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ. ಅಲ್ಲದೆ ಜಿಲ್ಲೆಯ ಸುರಪುರ, ಶಹಾಪುರ ಹಾಗೂ ಗುರುಮಠಕಲ್ನಲ್ಲಿ ಕೂಡ ರೈತರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಇನ್ನೂ ಇದೇ ವೇಳೆ ಜಿಲ್ಲೆಯ ಸಾಮೂಹಿಕ ಸಂಘಟನೆಗಳ ಒಕ್ಕೂಟದಿಂದ ಬಂದ್ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು. ಈ ವೇಳೆ ಬಹುತೇಕ ಎಲ್ಲಾ ಸಂಘಟನೆಗಳು ನಾಳೆ ಬಂದ್ನಲ್ಲಿ ಭಾಗವಹಿಸಲಿವೆ ಎಂದು ರೈತ ಮುಖಂಡರು ಹೇಳಿದ್ದಾರೆ.