ಸುರಪುರ:ತಾಲೂಕಿನಲ್ಲಿ ಮಳೆಗಾಲದ ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದರಿಂದ ರೈತರು ಮುಂಗಾರು ಬಿತ್ತನೆ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಬಿತ್ತನೆ ಬೀಜ ಪಡೆಯುತ್ತಿದ್ದಾರೆ.
ಸುರಪುರದಲ್ಲಿ ಬಿತ್ತನೆ ಚಟುವಟಿಕೆ: ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಖರೀದಿ ಜೋರು
ಸುರಪುರದ ರೈತರು ಮುಂಗಾರು ಬಿತ್ತನೆಗೆ ಅವಶ್ಯಕವಿರುವ ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಬೀಜಗಳ ಖರೀದಿಸುತ್ತಿದ್ದಾರೆ.
ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಖರೀದಿ ಜೋರು
ಮುಂಗಾರು ಬಿತ್ತನೆಗೆ ಅವಶ್ಯಕವಿರುವ ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಬೀಜಗಳ ಖರೀದಿಸುತ್ತಿದ್ದಾರೆ.
ಮುಂಗಾರು ಬಿತ್ತನೆಗೆ ಬೇಕಾಗುವ ಎಲ್ಲಾ ತರಹದ ಬೀಜಗಳು ಲಭ್ಯವಿದ್ದು, ಅಗತ್ಯ ದಾಖಲೆಗಳನ್ನು ನೀಡಿ ರೈತರು ಪಡೆದುಕೊಳ್ಳಬಹುದು ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದರು.