ಯಾದಗಿರಿ:ರೈತರು ಬೆಳೆದ ಬೆಳೆ ದಲ್ಲಾಳಿಗಳ ಪಾಲಾಗುತ್ತಿದ್ದು, ಕೂಡಲೇ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ವೈಜ್ಞಾನಿಕ ಬೆಲೆ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ವೈಜ್ಞಾನಿಕ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ - Farmers protest at surapuara Gandhi Chowk in Yadagiri
ಮಧ್ಯವರ್ತಿಗಳ ಹಾವಳಿಯಿಂದ ರೈತರು ಬೆಳೆದ ಶೇಂಗಾ, ಹತ್ತಿ, ತೊಗರಿ, ಭತ್ತದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಅನ್ನದಾತ ಸಂಕಷ್ಟಕ್ಕೀಡಾಗಿದ್ದಾನೆ. ಹೀಗಾಗಿ ಸರ್ಕಾರ ಕೂಡಲೇ ವೈಜ್ಞಾನಿಕ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ಯಾದಗಿರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಸುರಪುರ ನಗರದ ಗಾಂಧಿ ಚೌಕ್ ಬಳಿ ಪ್ರತಿಭಟನೆ ನಡೆಸಿದ ರೈತರು, ಮಧ್ಯವರ್ತಿಗಳ ಹಾವಳಿಯಿಂದ ರೈತರು ಬೆಳೆದ ಶೇಂಗಾ, ಹತ್ತಿ, ತೊಗರಿ, ಭತ್ತದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಅನ್ನದಾತ ಸಂಕಷ್ಟಕ್ಕೀಡಾಗಿದ್ದಾನೆ. ಹೀಗಾಗಿ ಸರ್ಕಾರ ಕೂಡಲೇ ಷರತ್ತುಬದ್ಧ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.
ನೆರೆ ಹಾವಳಿಯಿಂದ ಹಾನಿಯಾದ ಶಹಪುರ, ಸುರಪುರ, ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಮತ್ತು ಹಿಂದಿನ ಸರ್ಕಾರ ಘೋಷಿಸಿದ್ದ 2 ಲಕ್ಷ ವರೆಗಿನ ಸಾಲಮನ್ನಾ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು. ಭತ್ತ ರಾಶಿ ಮಷಿನ್ನಿಂದ ದಲ್ಲಾಳಿಗಳು ಹೆಚ್ಚಿನ ಹಣ ಸುಲಿಗೆ ಮಾಡುತ್ತಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.