ಕರ್ನಾಟಕ

karnataka

ETV Bharat / state

ಯಾದಗಿರಿಗೆ ಪ್ರವಾಹದ ಭೀತಿ: ಕೃಷ್ಣಾ ನದಿಗೆ 35 ಸಾವಿರ ಕ್ಯೂಸೆಕ್ ನೀರು - Krishna river

ಕಳೆದ ವರ್ಷ ಪ್ರವಾಹದಿಂದ ತತ್ತರಿಸಿದ ಯಾದಗಿರಿ ಜಿಲ್ಲೆಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೃಷ್ಣಾ ನದಿಗೆ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದ್ದು, ಜನರು ತಮ್ಮ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವುದರ ಜೊತೆಗೆ ಕೃಷ್ಣಾ ನದಿ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಯಾದಗಿರಿಗೆ ಪ್ರವಾಹದ ಭೀತಿ
ಯಾದಗಿರಿಗೆ ಪ್ರವಾಹದ ಭೀತಿ

By

Published : Aug 6, 2020, 5:41 PM IST

ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಜನರಿಗೆ ಈಗ ಪ್ರವಾಹದ ಭೀತಿ ಎದುರಾಗಿದ್ದು, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ನೀರಿನ ಪ್ರಮಾಣ 50 ಸಾವಿರ ಕ್ಯೂಸೆಕ್​ಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಸಮೀಪವಿರುವ ಬಸವಸಾಗರ ಜಲಾಶಯ 492.25 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದ್ದು, 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸದ್ಯಕ್ಕೆ ಬಸವಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ 491.42 ಮೀಟರ್ ನೀರು ಸಂಗ್ರಹವಾಗಿದ್ದು, 29.57 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದಿಂದ ನೀರು ಬಿಡಲಾಗಿದ್ದು, ಬಸವಸಾಗರ ಜಲಾಶಯಕ್ಕೆ ಈಗ 35 ಸಾವಿರ ಕ್ಯೂಸೆಕ್ ಒಳಹರಿವಿದ್ದು, ಎರಡು ಗೇಟ್​ಗಳ ಮೂಲಕ 35 ಸಾವಿರ ಕ್ಯೂಸೆಕ್ ನೀರು ಬೀಡಲಾಗುತ್ತಿದೆ. ಜಲಾಶಯದ ಒಳಹರಿವು ಹೆಚ್ಚಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುವುದು ಅಂತ ಕೃಷ್ಣಾ ಭಾಗ್ಯ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾಗಿ ಜನರು ತಮ್ಮ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವುದರ ಜೊತೆಗೆ ಕೃಷ್ಣಾ ನದಿ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ಸದ್ಯಕ್ಕೆ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 35 ಸಾವಿರ ಕ್ಯೂಸೆಕ್ ಹಾಗೂ 50 ಸಾವಿರ ಕ್ಯೂಸೆಕ್ ನೀರು ಬಿಟ್ಟರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ ನೀರಿನ ಪ್ರಮಾಣ ಹೆಚ್ಚಾದರೆ ನದಿ ಪಾತ್ರದ ಜನರು ಮತ್ತೆ ಪ್ರವಾಹ ಎದುರಿಸುವ ಸಾಧ್ಯತೆಗಳಿವೆ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಸುರಪುರ, ಶಹಪುರ, ಹುಣಸಗಿ, ಹಾಗೂ ವಡಗೇರಾ ತಾಲೂಕಿನಲ್ಲಿ ನಾಲ್ಕು ಕಾಳಜಿ ಕೇಂದ್ರಗಳನ್ನು ಗುರತಿಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ABOUT THE AUTHOR

...view details