ಸುರಪುರ(ಯಾದಗಿರಿ):ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಆಹುತಿ - ಸುರಪುರ ತಾಲೂಕು ಕಕ್ಕೇರಾ ಗ್ರಾಮ
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದ ಮನೆಯೊಂದಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ..ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಕಕ್ಕೇರಾ ಗ್ರಾಮದ ಶರಣಪ್ಪ ಮತ್ತು ತಿಪ್ಪಣ್ಣ ಯಾಳಗಿ ಸಹೋದರರ ಮನೆಗೆ ಭಾನುವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿದ್ದು, ಸ್ಥಳೀಯ ಯುವಕರು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಶರಣಪ್ಪ ಮತ್ತು ತಿಪ್ಪಣ್ಣ ಯಾಳಗಿ ಸಹೋದರರು ಶುಭ ಕಾರ್ಯಗಳಿಗೆ ಅಡುಗೆ ತಯಾರಿಸುವ ಕೆಲಸ ಮಾಡುತ್ತಿದ್ದು, ನಿನ್ನೆಯಷ್ಟೆ ತಂದಿದ್ದ ಸಕ್ಕರೆ ಚೀಲ, ಅಡುಗೆ ಎಣ್ಣೆ ಡಬ್ಬಿಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.