ಯಾದಗಿರಿ:ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ 80 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು.. ನದಿ ಪಾತ್ರದ ಜನರಲ್ಲಿ ಆತಂಕ - ಯಾದಗಿರಿ ಸುದ್ದಿ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ 80 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣೆಯ ರೌದ್ರನರ್ತನಕ್ಕೆ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದ ಆಂಜನೇಯ ದೇವಸ್ಥಾನ ಮುಳುಗಡೆ ಭೀತಿ ಎದುರಿಸುತ್ತಿದೆ.
ಕೃಷ್ಣೆಯ ರೌದ್ರನರ್ತನಕ್ಕೆ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದ ಆಂಜನೇಯ ದೇವಸ್ಥಾನ ಮುಳುಗಡೆ ಭೀತಿ ಎದುರಿಸುತ್ತಿದೆ. ಇನ್ನು, ಸುರಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ನಿರ್ಮಿಸಲಾದ ಜಾಕ್‌ವೆಲ್ ಮುಳುಗಡೆ ಹಂತ ತಲಪುತ್ತಿದ್ದು, ಜಾಕ್‌ವೆಲ್ ಮುಳುಗಡೆಯಾದರೆ ಕಳೆದ ವರ್ಷದಂತೆ ಈ ವರ್ಷವೂ ಕೂಡ ಕುಡಿಯುವ ನೀರಿನ ಅಭಾವ ಉಂಟಾಗಲಿದೆ.
ಈ ಕುರಿತು ಕೃಷ್ಣಾ ನದಿ ತೀರದ ಶೆಳ್ಳಗಿ ಗ್ರಾಮದ ರೈತರಾದ ಶರಣಗೌಡ ಮಾತನಾಡಿ, ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ, ಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆಗಳು ನೀರು ಪಾಲಾಗಿವೆ. ಕಳೆದ ವರ್ಷದ ಪ್ರವಾಹಕ್ಕೊಳಗಾದ ಬೆಳೆಗಳು, ಮತ್ತೆ ಈ ಬಾರಿಯೂ ಪ್ರವಾಹಕ್ಕೊಳಗಾಗಿವೆ. ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಕಳೆದ ವರ್ಷ ನಯಾ ಪೈಸೆ ಪರಿಹಾರ ನೀಡಿಲ್ಲ. ಈ ವರ್ಷವಾದರೂ ಪರಿಹಾರ ನೀಡಲಿ ಎಂದು ಮನವಿ ಮಾಡಿದ್ದಾರೆ.