ಕರ್ನಾಟಕ

karnataka

ETV Bharat / state

ಕೃಷ್ಣ ನದಿ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ - ಜೆಸ್ಕಾಂ ವಿದ್ಯುತ್ ಕಂಬ

ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಕೋಟ್ಯಾಂತರ ರೂಪಾಯಿ ನಷ್ಟವುಂಟಾಗಿದ್ದು ಜನರು ಮತ್ತೆ ಭೀಕರ ಬರಗಾಲಕ್ಕೆ ತುತ್ತಾಗಿದ್ದಾರೆ.

ಕೃಷ್ಣ ನದಿ ಪ್ರವಾಹ

By

Published : Aug 20, 2019, 1:42 AM IST

ಯಾದಗಿರಿ : ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಸಾರ್ವಜನಿಕರ ಆಸ್ತಿ ಪಾಸ್ತಿ ನಷ್ಟವಾಗುವುದರ ಜೊತೆಗೆ ಸರ್ಕಾರದ ಬೊಕ್ಕಸವೂ ಬರಿದಾಗಿದೆ.

ಕೃಷ್ಣ ನದಿ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ

ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಕೋಟ್ಯಾಂತರ ರೂಪಾಯಿ ನಷ್ಟವುಂಟಾಗಿದ್ದು ಜನರು ಮತ್ತೆ ಭೀಕರ ಬರಗಾಲಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಸುರಪೂರ , ಶಹಾಪುರ , ಯಾದಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವುಂಟಾಗಿದೆ.

ಜಮೀನುಗಳಲ್ಲಿ ಬೆಳೆದ ಪೈರು ನೀರಿನ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು ಅನ್ನದಾತರು ಕಂಗಾಲಾಗಿದ್ದಾರೆ. ನೀರಿನ ರಭಸಕ್ಕೆ ಜಮೀನುಗಳಲ್ಲಿ ಮಣ್ಣು ಕೊಚ್ಚಿ ಹೋಗಿದ್ದು, ಜಮೀನಿನ ತುಂಬಾ ಉಸುಕು ತುಂಬಿಕೊಂಡಿದೆ. ಭಿತ್ತಿದ ಪೈರು ಕೊಚ್ಚಿ ಹೋಗಿದ್ದು ಅನ್ನದಾತರನ್ನು ಕಂಗಾಲಾಗಿಸಿದೆ.

ಸರ್ಕಾರದ ಯೋಜನೆಯಡಿಯಲ್ಲಿ ನಿರ್ಮಿತವಾದ ರಸ್ತೆಗಳು ಪ್ರವಾಹಕ್ಕೆ ಸಿಲುಕಿ ರಸ್ತೆಗಳ ಡಾಂಬರೀಕರಣವು ಕಿತ್ತುಕೊಂಡು ಹೋಗಿವೆ. ಜೆಸ್ಕಾಂ ವಿದ್ಯುತ್ ಕಂಬಗಳು ನೀರಿನ ಪ್ರವಾಹಕ್ಕೆ ಕೊಚ್ಚಿ ಜಮೀನುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉರುಳಿ ಹೋಗಿವೆ.

ABOUT THE AUTHOR

...view details