ಸುರಪುರ :ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳಬೇಕೆಂದು ಧರಣಿ ನಡೆಸಿದ್ದಾರೆ.
ಮಾಜಿ ಶಾಸಕ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಪ್ರತಿಭಟನೆ.. ಓದಿ: ಬಿ.ವೈ. ವಿಜಯೇಂದ್ರ ಮುಂದಿನ ರಾಜಾಹುಲಿ: ಸಚಿವ ಎಸ್.ಟಿ. ಸೋಮಶೇಖರ್
ಗೆದ್ದಲಮರಿ ತಾಲೂಕು ಪಂಚಾಯತ್ ಕ್ಷೇತ್ರದ ಮಾಜಿ ಸದಸ್ಯ ಬಸವರಾಜ ಅನ್ನೋರ ವಿರುದ್ಧ ಪೊಲೀಸರು ಕಾರಣವಿಲ್ಲದೆ ಪ್ರಕರಣ ದಾಖಲಿಸಿ ಅವರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಧರಣಿ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟಿದ್ದ ಜನರು ನಂತರ ನೂರಕ್ಕೂ ಹೆಚ್ಚು ಕಾರ್ಯಕರ್ತರು ಧರಣಿಯಲ್ಲಿ ಭಾಗಿಯಾದರು.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಅವರ ಸುಪುತ್ರ ರಾಜಾ ವೇಣುಗೋಪಾಲ ನಾಯಕ ಸೇರಿದಂತೆ ಅನೇಕ ಜನ ಮುಖಂಡರು ಧರಣಿಯಲ್ಲಿದ್ದರು. ಧರಣಿ ಸ್ಥಳಕ್ಕೆ ಹುಣಸಗಿ ಸರ್ಕಲ್ ಇನ್ಸ್ಪೆಕ್ಟರ್ ದೌಲತ್ ಎನ್.ಕೆ ಆಗಮಿಸಿದ್ದು, ಧರಣಿ ನಿರತರ ಮನವೊಲಿಸುವ ಪ್ರಯತ್ನ ಮಾಡಿದರು.