ಕರ್ನಾಟಕ

karnataka

ETV Bharat / state

ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್​ ಆರೋಪ: ಶಹಾಪುರ ಸರ್ಕಾರಿ ಶಾಲೆಯ ಶಿಕ್ಷಕ ಅಮಾನತು - ಶಹಾಪುರ ನಗರದ ಸರ್ಕಾರಿ ಶಾಲೆಯ ಶಿಕ್ಷಕ ಅಮಾನತು

ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡಿದ ಆರೋಪದಡಿ ಶಹಾಪುರ ನಗರದ ಸರ್ಕಾರಿ ಸಂಯುಕ್ತ ಬಾಲಕಿಯರ ಶಾಲೆ ಶಿಕ್ಷಕ ಸಾಜಿದ್ ಹುಸೇನ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಸಾಜಿದ್ ಹುಸೇನ್
ಸಾಜಿದ್ ಹುಸೇನ್

By

Published : Oct 7, 2021, 5:28 PM IST

ಯಾದಗಿರಿ: ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನ ಸಿದ್ದಾರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪ್ರತಿಕ್ರಿಯೆ ನೀಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಶಹಾಪುರ ನಗರದ ಸರ್ಕಾರಿ ಸಂಯುಕ್ತ ಬಾಲಕಿಯರ ಶಾಲೆ ಶಿಕ್ಷಕ ಸಾಜಿದ್ ಹುಸೇನ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಹಿನ್ನೆಲೆ:

ಶಹಾಪುರ ನಗರದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದಿಂದ ನಗರ ಪೊಲೀಸ್ ಠಾಣೆಯಲ್ಲಿ ಅ.2 ರಂದು ಶಿಕ್ಷಕ ಹುಸೇನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ಪೊಲೀಸರ ಆದೇಶದ ಆಧಾರದ ಮೇರೆಗೆ ಶಿಕ್ಷಕನನ್ನು ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡಿದ ಆರೋಪದಡಿ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಶಿಕ್ಷಕನು ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲವೆಂದು ಸೂಚಿಸಲಾಗಿದೆ.

ABOUT THE AUTHOR

...view details