ಯಾದಗಿರಿ :ಜಿಲ್ಲೆಯ ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಗ್ರಾಮದಲ್ಲಿರುವ ಸಮಸ್ಯೆಗಳನ್ನು ತೋರಿಸುವ ಮೂಲಕ ತರಾಟೆಗೆ ತೆಗೆದುಕೊಂಡರು.
ಯಾದಗಿರಿ : ಗ್ರಾಮ ವಾಸ್ತವ್ಯಕ್ಕೆ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು - Grama vastavya program
ಗ್ರಾಮಾಭಿವೃದ್ಧಿಗೆಂದು ಬರುತ್ತಿರುವ ಸರ್ಕಾರದ ಅನುದಾನ ಉಳ್ಳವರ ಪಾಲಾಗುತ್ತಿದೆ. ಕೆಲಸ ಮಾಡದೆ ಭೋಗಸ್ ಬಿಲ್ ಪಾವತಿ ಮಾಡುತ್ತಿದ್ದಾರೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು..
ಬೊಮ್ಮನಹಳ್ಳಿ ಗ್ರಾಮ ಮೂಲಸೌಕರ್ಯ ಇಲ್ಲದೆ ನರಳುತ್ತಿದೆ. ಸಿಸಿ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಈವರೆಗೂ ಪರಿಹಾರ ನೀಡುವ ಗೋಜಿಗೆ ಹೋಗಿಲ್ಲ. ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ಮುಂದೆ ಅಳಲುತೋಡಿಕೊಂಡರು.
ಗ್ರಾಮಾಭಿವೃದ್ಧಿಗೆಂದು ಬರುತ್ತಿರುವ ಸರ್ಕಾರದ ಅನುದಾನ ಉಳ್ಳವರ ಪಾಲಾಗುತ್ತಿದೆ. ಕೆಲಸ ಮಾಡದೆ ಭೋಗಸ್ ಬಿಲ್ ಪಾವತಿ ಮಾಡುತ್ತಿದ್ದಾರೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ನಮ್ಮ ಗ್ರಾಮಕ್ಕೆ ಯಾವುದೇ ಮೂಲಸೌಕರ್ಯ ನೀಡಿಲ್ಲ. ಕೂಡಲೇ ಮೂಲಸೌಕರ್ಯ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.