ಗುರುಮಠಕಲ್ (ಯಾದಗಿರಿ): ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆ ಗುರುಮಠಕಲ್ ಪಟ್ಟಣದಲ್ಲಿ ಪೊಲೀಸರು ಜನ ಜಾಗೃತಿ ಮೂಡಿಸಿದ್ರು.
ಗುರುಮಠಕಲ್: ಸಾರ್ವಜನಿಕರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿದ ಪೊಲೀಸರು - yadagiri news
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಬಸ್ ನಿಲ್ದಾಣ, ಮಾರುಕಟ್ಟೆಯ ಜನನಿಬಿಡ ಸ್ಥಳಗಳಲ್ಲಿ ಗುರುಮಠಕಲ್ ಸಿಪಿಐ ದೇವಿಂದ್ರಪ್ಪ ಧೂಳಖೇಡ ಮೈಕ್ ಮೂಲಕ ಕೊರೊನಾ ಕುರಿತು ಜಾಗೃತಿ ಮೂಡಿಸಿದರು.
ಗುರುಮಠಕಲ್: ಸಾರ್ವಜನಿಕರಲ್ಲಿ ಕೊರೊನಾ ಜಾಗೃತಿ ಮೂಡಿಸಿದ ಪೊಲೀಸರು
ಪಟ್ಟಣದ ಬಸ್ ನಿಲ್ದಾಣ, ಮಾರುಕಟ್ಟೆಯ ಜನನಿಬಿಡ ಸ್ಥಳಗಳಲ್ಲಿ ಗುರುಮಠಕಲ್ ಸಿಪಿಐ ದೇವಿಂದ್ರಪ್ಪ ಧೂಳಖೇಡ ಮೈಕ್ ಮೂಲಕ ಕೊರೊನಾ ಜಾಗೃತಿ ಮೂಡಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 1,016ಕ್ಕೆ ಏರಿಕೆಯಾಗಿದೆ. ಹೀಗಾಗಿ ಜನರು ಸುಖಾಸುಮ್ಮನೆ ಓಡಾಟ ನಡೆಸದಂತೆ ಸೂಚಿಸಿದರು.
ಉದ್ಯೋಗ, ವ್ಯಾಪಾರ ವಹಿವಾಟುವಿಗೆ ತೆರಳುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿಬೇಕು. ಆಗಾಗ ಸಾನಿಟೈಸ್ ಮಾಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ, ಸೀನುವಾಗ ಬಾಯಿಗೆ ಬಟ್ಟೆ ಮುಚ್ಚಿಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು.